ಕೊಂಗಂಡ. ಎನ್. ಧರ್ಮಜ ದೇವಯ್ಯ, ಸಹಕಾರಿಗಳು: ರುದ್ರುಗುಪ್ಪೆ. Rudraguppe

ಕೊಂಗಂಡ. ಎನ್. ಧರ್ಮಜ ದೇವಯ್ಯ, ಸಹಕಾರಿಗಳು: ರುದ್ರುಗುಪ್ಪೆ. Rudraguppe


ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬಿಟ್ಟಂಗಾಲ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ಬರುವ ರುದ್ರುಗುಪ್ಪೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷರಾಗಿ ಕೊಂಗಂಡ. ಎನ್. ಧರ್ಮಜ ದೇವಯ್ಯ ನವರು ಪ್ರಸ್ತುತ ಕಾರ್ಯನಿರ್ವಹಿಸುತ್ತಿದ್ದಾರೆ.

ತಮ್ಮ ತಂದೆಯವರ ಸಹಕಾರ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿನ ಕಾರ್ಯವೈಖರಿಗಳಿಂದ ಪ್ರೇರೇಪಣೆಗೊಂಡು 1983ರಲ್ಲಿ ರುದ್ರುಗುಪ್ಪೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸದಸ್ಯತ್ವವನ್ನು ಪಡೆಯುತ್ತಾರೆ.

2013ರಲ್ಲಿ ರುದ್ರುಗುಪ್ಪೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ  ನಡೆದ  ಚುನಾವಣೆಯಲ್ಲಿ ಸ್ಪರ್ಧಿಸಿ ಆಯ್ಕೆಗೊಂಡ ಕೊಂಗಂಡ. ಎನ್. ದೇವಯ್ಯನವರು, ಮೊದಲ ಬಾರಿಗೆ ನಿರ್ದೇಶಕರಾಗಿ ಮತ್ತು 2018ರ ಚುನಾವಣೆಯಲ್ಲಿ ಆಯ್ಕೆಗೊಂಡು ಉಪಾಧ್ಯಕ್ಷರಾಗಿ ಪ್ರಸ್ತುತ ಸೇವೆ ಸಲ್ಲಿಸುತ್ತಿದ್ದಾರೆ. ಶ್ರೀಯುತರು ಸರಿ ಸುಮಾರು 39 ವರ್ಷಗಳಿಂದ ಸಹಕಾರ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

2020-21ರ ಸಾಲಿನಲ್ಲಿ ರುದ್ರುಗುಪ್ಪೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 9.85 ಲಕ್ಷಗಳ ಲಾಭವನ್ನು ಗಳಿಸಿದ್ದು, ಶೇಕಡ 99% ಸಾಲ ಮರುಪಾವತಿಯಾಗಿದೆ ಎಂದು ದೇವಯ್ಯನವರು ತಿಳಿಸಿದರು. ಸಂಘದ ವತಿಯಿಂದ ಗೊಬ್ಬರ ಮಾರಾಟವು ದಾಖಲೆಯಾಗಿದ್ದು, ಜಾಮೀನು ಸಾಲ, ವಾಹನ ಸಾಲ, ಕೃಷಿಯೇತರ ಸಾಲ, ಮಧ್ಯಮಾವಧಿ ಸಾಲ, ಕೆಸಿಸಿ ಸಾಲ ಹಾಗೂ ಸಭಾಂಗಣದಿಂದ ಬಾಡಿಗೆ ರೂಪದ ಆದಾಯ ಇವುಗಳಿಂದಾಗಿ ರುದ್ರುಗುಪ್ಪೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಲಾಭದ ಹಾದಿಯಲ್ಲಿ ಸಾಗುತ್ತಿದೆ ಎಂದು ಈ ಸಂದರ್ಭದಲ್ಲಿ  ತಿಳಿಸಿದರು.  

ಸರಿ ಸುಮಾರು 50 ಲಕ್ಷ ವೆಚ್ಚದಲ್ಲಿ ರುದ್ರುಗುಪ್ಪೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಗೋದಾಮು, ಆಡಳಿತ ಕಚೇರಿ ಹಾಗೂ ಸಭಾಂಗಣ  ನಿರ್ಮಾಣ ಮಾಡಲಾಗಿದ್ದು, ಸಂಘದ ಆಡಳಿತ ವ್ಯವಸ್ಥೆಯನ್ನು ಸಂಪೂರ್ಣ ಡಿಜಿಟಲಿಕರಣ ಮಾಡುವ ಕಾರ್ಯವು ಪ್ರಗತಿಯಲ್ಲಿದೆ ಎಂದು ದೇವಯ್ಯನವರು ತಿಳಿಸಿದರು. ಶಾಸಕರ ನಿಧಿಯಿಂದ 5ಲಕ್ಷ ವೆಚ್ಚದಲ್ಲಿ ಸಂಘದ ಸುತ್ತಲಿನ ಆವರಣಗೊಡೆ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದು, ಹಾಗೆ ಸಂಘದ ಮೊದಲನೇ ಮಹಡಿಯಲ್ಲಿ ವಾಣಿಜ್ಯ ಸಂಕೀರ್ಣ ಹಾಗೂ ಆಡಳಿತ ಮಂಡಳಿಯ ಸಭಾಂಗಣ ಮಾಡುವ ಕ್ರೀಯಾ ಯೋಜನೆಯಿದೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು.

ರುದ್ರುಗುಪ್ಪೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಕೊಡಗು ಡಿಸಿಸಿ ಬ್ಯಾಂಕಿನಿಂದ ಉತ್ತಮ ಕಾರ್ಯನಿರ್ವಹಣೆಗಾಗಿ ಬಹುಮಾನವನ್ನು ಪಡೆದುಕೊಂಡಿದೆ. ಜೊತೆಗೆ ಅಪೆಕ್ಸ್ ಬ್ಯಾಂಕಿನಿಂದಲೂ ಪ್ರಶಸ್ತಿ ಪಡೆದುಕೊಂಡಿದೆ ಎಂದ ದೇವಯ್ಯನವರು, ರುದ್ರುಗುಪ್ಪೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಲಾಭವನ್ನು ಹೊಂದಿ ಪ್ರಗತಿಯತ್ತ ಸಾಗಲು ಸಂಘದ ಅಧ್ಯಕ್ಷರು, ಆಡಳಿತ ಮಂಡಳಿ, ಸದಸ್ಯರು, ಸಿಬ್ಬಂದಿಗಳು ಹಾಗೂ ಗ್ರಾಹಕರ ಸಹಕಾರ ಅತ್ಯುತ್ತಮವಾಗಿ ದೊರಕುತಿದೆ ಎಂದು ಈ ಸಂದರ್ಭದಲ್ಲಿ ದೇವಯ್ಯನವರು, ತಿಳಿಸಿದರು.

ಸಹಕಾರ ಕ್ಷೇತ್ರಕ್ಕೆ ತನ್ನದೆ ಆದ ಇತಿಹಾಸವಿದ್ದು, ಪಾರದಶರ್ಕ ಆಡಳಿತ, ಸೇವಾ ಮನೋಭಾವನೆಯಿಂದ ಕೂಡಿದ ಸಹಕಾರಿಗಳು ಇದ್ದರೆ ಸಹಕಾರ ಕ್ಷೇತ್ರ ಇನ್ನಷ್ಟು ಅಭಿವೃದ್ಧಿ ಹೊಂದುತ್ತದೆ ಎಂದ ಧರ್ಮಜ ದೇವಯ್ಯನವರು, ಸರ್ಕಾರದ ಹಸ್ತಕ್ಷೇಪ ಸಹಕಾರ ಸಂಘಗಳಲ್ಲಿ ಪೂರ್ಣ ಮಟ್ಟದಲ್ಲಿ ಇರಬಾರದು ಹಾಗೆ ಸಹಕಾರ ಕ್ಷೇತ್ರವು ಸಹಕಾರ ಕ್ಷೇತ್ರವಾಗಿಯೇ ಉಳಿಯಬೇಕು ಎಂದು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದರು.  

ಸಹಕಾರಿ ಕ್ಷೇತ್ರಕ್ಕೆ ಹೆಚ್ಚು ಹೆಚ್ಚು ಯುವಶಕ್ತಿಯು ಪಾಲ್ಗೊಂಡು ಸೇವಾ ಮನೋಭಾವದಿಂದ ಸ್ವಾರ್ಥರಹಿತವಾಗಿ ಆತ್ಮತೃಪ್ತಿಯಿಂದ ಸೇವೆ ಸಲ್ಲಿಸಬೇಕು ಹಾಗೂ ಹಿರಿಯ ಸಹಕಾರಿಗಳಿಂದ ಸಲಹೆ ಸೂಚನೆಗಳನ್ನು ಪಡೆದು ಸಹಕಾರ ಕ್ಷೇತ್ರದ ಪ್ರಗತಿಗೆ ತಮ್ಮನ್ನು ತೊಡಿಗಿಸಿಕೊಳ್ಳಬೇಕು ಎಂದು ಸಹಕಾರ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡುತ್ತಿರುವ ಭಾವಿ ಯುವಶಕ್ತಿಗೆ ಧರ್ಮಜ ದೇವಯ್ಯನವರು, ತಮ್ಮ ಸಂದೇಶವನ್ನು ಈ ಸಂದರ್ಭದಲ್ಲಿ ನೀಡಿದರು.

ರಾಜಕೀಯ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಧರ್ಮಜ ದೇವಯ್ಯನವರು, ಭಾರತೀಯ ಜನತಾ ಪಾರ್ಟಿಯ ಸಕ್ರೀಯ ಕಾರ್ಯಕರ್ತರಾಗಿದ್ದಾರೆ. ಸಾಮಾಜಿಕ ಕ್ಷೇತ್ರದಲ್ಲಿ ವಿರಾಜಪೇಟೆ ಕೊಡವ ಸಮಾಜದ ನಿರ್ದೆಶಕರಾಗಿ ಸೇವೆ ಸಲ್ಲಿಸುತ್ತಿದಾರೆ.

ಕೊಂಗಂಡ. ಎನ್. ಧರ್ಮಜ ದೇವಯ್ಯನವರು, ತಂದೆ ಕೊಂಗಂಡ ಮುತ್ತಣ್ಣ ಹಾಗೂ ತಾಯಿ ಕೆ.ಎಂ.ಬೋಜಮ್ಮ ದಂಪತಿಯ ಪುತ್ರರಾಗಿದ್ದಾರೆ. ಪತ್ನಿ ಶುಭಾ ದೇವಯ್ಯ ಗೃಹಿಣಿಯಾಗಿದ್ದಾರೆ. ಮಗ ಕೃತನ್ ದೇವಯ್ಯ  ಪದವಿ ವ್ಯಾಸಂಗ ನಿರತರಾಗಿದ್ದಾರೆ.

ಮೂಲತಃ ಕೃಷಿಕರಾಗಿರುವ  ಕೊಂಗಂಡ. ಎನ್. ಧರ್ಮಜ ದೇವಯ್ಯನವರು ಪ್ರಸ್ತುತ ಬಿಟ್ಟಂಗಾಲ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ  1ನೇ ರುದ್ರುಗುಪ್ಪೆ ಗ್ರಾಮದಲ್ಲಿ ಕುಟುಂಬ ಸಮೇತ ನೆಲೆಸಿದ್ದಾರೆ. ಇವರ ಸಹಕಾರ, ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯ ಸೇವೆಯು ಹೀಗೆ ನಿರಂತರವಾಗಿ ಮುಂದುವರೆಯಲಿ ಎಂದು “ಸರ್ಚ್‌ ಕೂರ್ಗ್ ಮೀಡಿಯಾ” ವು  ಹಾರೈಸುತ್ತದೆ.

ಸಂದರ್ಶನ ದಿನಾಂಕ: 05-01-2022

Search Coorg Media

Coorg's Largest Online Media Network

"ಸರ್ಚ್‌ ಕೂರ್ಗ್‌ ಮೀಡಿಯಾ"
ವಿಶ್ಲೇಷಣಾತ್ಮಕ ಪತ್ರಿಕೋದ್ಯಮದಲ್ಲಿ‌ ಕೃಷಿ, ಸಹಕಾರ, ಪರಿಸರ, ವಿಜ್ಞಾನ ಮತ್ತು ಗ್ರಾಮೀಣ ಜೀವನವನ್ನು ಕೇಂದ್ರೀಕರಿಸುವ ಆನ್‌ಲೈನ್‌ ಮಾಧ್ಯಮವಾಗಿ ಅಸಂಖ್ಯ ಚಂದಾದಾರರೊಂದಿಗೆ, ಅತಿದೊಡ್ಡ ಹಾಗೂ ಅತಿ ವಿಸ್ತಾರವಾದ ಕೊಡಗಿನ ಜನಪ್ರಿಯ ಮಾಧ್ಯಮವಾಗಿದೆ.
Previous Post Next Post